ಯುವ ರಾಜಕುಮಾರ್ ಅಭಿನಯದ “ಯುವ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ವಿಜಯ್ ಕಿರಗಂದೂರು ನಿರ್ಮಾಣದ ಹಾಗೂ ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರ2024ರ ಮಾರ್ಚ್ 28ರಂದು ಬಿಡುಗಡೆ
ಇಡೀ ಪ್ರಪಂಚವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ “ಕೆ ಜಿ ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಜನಪ್ರಿಯ ಚಿತ್ರಗಳ ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಚೊಚ್ಚಲ ಚಿತ್ರ “ಯುವ” ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ 2024 ರ ಮಾರ್ಚ್ 28 ರಂದು ಬಿಡುಗಡೆಯಾಗುತ್ತಿದೆ. ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹೊಂಬಾಳೆ ಫಿಲಂಸ್ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.